ಮೀನು ರಪ್ತು ವಾಹನದಲ್ಲಿ ಅಕ್ರವಾಗಿ ಗೋವಾ ಲಿಕ್ಕರ್​​ ಸಾಗಾಟ: 35 ಲಕ್ಷ ಮೌಲ್ಯದ ಮದ್ಯ ವಶಕ್ಕೆ

Edited By:

Updated on: Nov 17, 2026 | 2:27 PM

ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ಮೀನು ಸಾಗಿಸುವ ಕೋಲ್ಡ್ ಸ್ಟೋರೇಜ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 350 ಬಾಕ್ಸ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 35.28 ಲಕ್ಷ ರೂ. ಆಗಿದೆ. ವಾಹನ ಸೇರಿ ಒಟ್ಟು 55.28 ಲಕ್ಷ ರೂ. ಮೌಲ್ಯದ ಸರಕು ವಶಪಡಿಸಿಕೊಳ್ಳಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

ಬೆಳಗಾವಿ, ನವೆಂಬರ್​​ 17: ಮೀನು ರಪ್ತು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ‌ ಗೋವಾ ಲಿಕ್ಕರ್​​ನ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೀನಿನ ಕೋಲ್ಡ್ ಸ್ಟೋರೇಜ್‌ನಲ್ಲಿ 350 ಬಾಕ್ಸ್ ಲಿಕ್ಕರ್ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 35.28 ಲಕ್ಷ ರೂಪಾಯಿ ಎನ್ನಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತ ವೈ. ಮಂಜುನಾಥ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದ್ದು, ಮದ್ಯದ ಜೊತೆಗೆ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ವಾಹನವನ್ನೂ ಜಪ್ತಿ ಮಾಡಲಾಗಿದೆ. ಅಧಿಕಾರಿಗಳನ್ನು ಕಣ್ಣು ತಪ್ಪಿಸಲು ನೇರವಾಗಿ ಬೆಳಗಾವಿಗೆ ಬಾರದ ಖದೀಮರು, ಗೋವಾದಿಂದ ಮಹಾರಾಷ್ಟ್ರಕ್ಕೆ ತೆರಳಿ ಬಳಿಕ ಬೆಳಗಾವಿ ‌ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More