ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಪಡಿಸುವಂತೆ ಮಳೆಯಲ್ಲಿ ರೈತರ ಅರೆಬೆತ್ತಲೆ ಪ್ರತಿಭಟನೆ
ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಪಡಿಸುವಂತೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಪಡಿಸುವಂತೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಆಗಮಿಸದ ಹಿನ್ನೆಲೆ, ರೈತರು ಕಾಂಪೌಂಡ್ ಹಾರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ರೈತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿಗೆ ಕುಳಿತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಿಸಿ ಕಚೇರಿ ಆವರಣದಲ್ಲಿ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.