ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

Edited By:

Updated on: Mar 20, 2026 | 7:14 PM

ಬೆಳಗಾವಿಯ ಉಕ್ಕಡ ಗ್ರಾಮದಲ್ಲಿ 15 ದಿನದ ಹಸುಗೂಸಿನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಣ್ಣುಮಗು ಎಂದು ತಿಳಿದು ತಂದೆ ಭೀಮರಾಯ ವಿಷವುಣಿಸಿ ಹತ್ಯೆ ಮಾಡಿದ್ದಾನೆ. ಮಾರ್ಚ್ 17 ರಂದು ನಡೆದ ಈ ಘಟನೆ ಕುಟುಂಬಸ್ಥರಿಂದ ಬಹಿರಂಗಗೊಂಡಿದ್ದು, ತಂದೆಯ ಕ್ರೂರತೆ ಸಮಾಜದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ, ಮಾರ್ಚ್​ 20: ಹೆಣ್ಣುಮಗು ಎನ್ನುವ ಕಾರಣಕ್ಕೆ 15 ದಿನದ ಹಿಂದೆ ಜನಸಿದ್ದ ಹಸುಗೂಸಿಗೆ ವಿಷವುಣಿಸಿ ಕೊಲೆ ಮಾಡಿದ್ದ ತಂದೆಯನ್ನು ಇದೀಗ ಪೊಲೀಸರು. ಭೀಮರಾಯ ಬಂಧಿತ ಆರೋಪಿ. ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಘಟನೆ ಬಗ್ಗೆ ಭೀಮರಾಯನ ಸಂಬಂಧಿಕರು ಪ್ರತಿಕ್ರಿಯಿಸಿದ್ದು, ಆತನ ಕ್ರೂರತೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 20, 2026 07:14 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More