ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ

Edited By:

Updated on: Jun 23, 2025 | 9:00 AM

ಮುಂಗಾರು ಮಳೆ ಅಬ್ಬರ ಜೋರಾಗಿರುವುದು ಮತ್ತು ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರ ಪರಿಣಾಮ ಬೆಳಗಾವಿ ಮೇಲಾಗಿದೆ. ಜಿಲ್ಲೆಯಲ್ಲಿ ಕೃಷ್ಣಾ, ದೂದಗಂಗಾ ನದಿ ಪ್ರವಾಹದೋಪಾದಿಯಲ್ಲಿ ಹರಿಯುತ್ತಿದ್ದು, ಚಿಕ್ಕೋಡಿ ವ್ಯಾಪ್ತಿಯ 7 ಸೇತುವೆಗಳು ಮುಳುಗಡೆಯಾಗಿವೆ. ಪರಿಣಾಮವಾಗಿ ಜನರು ಸಂಚಾರಕ್ಕೆ ಪರ್ಯಾಯ ಮಾರ್​ಗಗಳನ್ನು ಅವಲಂಬಿಸಬೇಕಾಗಿ ಬಂದಿದೆ. ಬೆಳಗಾವಿ ಪ್ರವಾಹದ ವಿಡಿಯೋ ಇಲ್ಲಿದೆ.

ಚಿಕ್ಕೋಡಿ, ಜೂನ್ 23: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಒಳ ಹರಿವು ಇದೆ. ನದಿಯಲ್ಲಿ ಪ್ರವಾಹ ಹೆಚ್ಚಾದ ಕಾರಣ ಚಿಕ್ಕೋಡಿ ವ್ಯಾಪ್ತಿಯ 7 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ದೂದಗಂಗಾ, ವೇದಗಂಗಾ, ಕೃಷ್ಣಾ ನದಿಗೆ ಅಡ್ಡಲಾಗಿರುವ ಸೇತುವೆಗಳು ಮುಳುಗಡೆಯಾಗಿವೆ. ದೂದಗಂಗಾ ನದಿಯ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ, ಭೋಜ-ಕಾರದಗಾ ಗ್ರಾಮಗಳ ಸಂಪರ್ಕ ಸೇತುವೆ ಜಲಾವೃತಗೊಂಡಿವೆ.

ವೇದಗಂಗಾ ನದಿಯ ಭಾರವಾಡ-ಕುನ್ನೂರು, ಭೋಜವಾಡಿ-ಕುನ್ನೂರು, ಅಕ್ಕೋಳ-ಸಿದ್ನಾಳ ಗ್ರಾಮಗಳ ಸಂಪರ್ಕ ಸೇತುವೆ ಮುಳುಗಡೆಯಾಗಿವೆ. ಹಾಗೆಯೇ, ಕೃಷ್ಣಾ ನದಿಗೆ ಅಡ್ಡಲಾಗಿರುವ ಯಡೂರು-ಕಲ್ಲೋಳ ಸೇತುವೆ, ಭಾವನಸೌಂದತ್ತಿ-ಮಾಂಜರಿ ಸಂಪರ್ಕ ಸೇತುವೆ ಜಲಾವೃತಗೊಂಡಿವೆ. ಜನರು ಪರ್ಯಾಯ ಮಾರ್ಗಗಳ ಮೂಲಕ ಸಂಚಾರ ಮಾಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More