ಬೆಳಗಾವಿ: ಇಂಗಳಿಯಲ್ಲಿ ಗೋ ರಕ್ಷಕರ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್

Edited By:

Updated on: Jun 30, 2025 | 9:44 AM

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶ್ರೀರಾಮ ಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಇದೀಗ ಯಮಕನಮರಡಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ಗೋರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ನಡೆದೆ ಎನ್ನಲಾಗಿದೆ.

ಬೆಳಗಾವಿ, ಜೂನ್​ 30: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲು ಮುಂದಾದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಯುವಕರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ನಡೆದಿದೆ. ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಅದೇ ಗ್ರಾಮದ ಯುವಕನೊಬ್ಬ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ.

ವಿವರಗಳಿಗೆ ಓದಿ: ಬೆಳಗಾವಿಯಲ್ಲಿ ಗೋ ರಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More