Castle Rock to Dudhsagar: ಭಾರೀ ಮಳೆ ಹಿನ್ನೆಲೆ ಕ್ಯಾಸಲ್​ರಾಕ್ ಸಂಪೂರ್ಣ ನಾಶ, ಕ್ಯಾಸಲ್ ರಾಕ್ ಟು ದೂಧ್ ​​​ಸಾಗರದವರೆಗೂ ಪ್ರವೇಶ ನಿಷೇಧ

Edited By: ಸಾಧು ಶ್ರೀನಾಥ್​

Updated on: Jul 27, 2023 | 12:56 PM

ಕ್ಯಾಸಲ್ ರಾಕ್​ದಿಂದ ದೂಧ್​​​ಸಾಗರದವರೆಗೂ ಪ್ರವೇಶ ನಿಷೇಧಿಸಲಾಗಿದೆ. ಇಂದು ಗುರುವಾರ ಕೂಡ ಬೆಳಗಾವಿ ಗೋವಾ ಮಾರ್ಗವಾಗಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.

ಕರ್ನಾಟಕ-ಗೋವಾ ಗಡಿಯಲ್ಲಿರುವ ಕ್ಯಾಸಲ್ ರಾಕ್​ ಬಳಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ರೈಲು ಹಳಿ ಮೇಲೆಯೇ ಮರದ ಕೊಂಬೆ, ಮಣ್ಣು, ಬಂಡೆ ಕುಸಿತವಾಗಿದೆ. ಇದರಿಂದ ಕಳೆದ 2 ದಿನಗಳಿಂದ ಬೆಳಗಾವಿ-ಗೋವಾ ರೈಲ್ವೆ (Railway) ಸಂಚಾರ ಸ್ಥಗಿತಗೊಂಡಿದೆ. ಕಳೆದ 36 ಗಂಟೆಗಳಿಂದ ರೈಲ್ವೆ ಹಳಿ ಮೇಲಿನ ಗುಡ್ಡ ತೆರವು ಕಾರ್ಯ ಭರದಿಂದ ನಡೆದಿದೆ. ಆದರೆ ಇಲ್ಲಿ ನಿರಂತರ ಭೂಕುಸಿತ ಉಂಟಾಗುತ್ತಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಕ್ಯಾಸಲ್ ರಾಕ್​ದಿಂದ (Castle Rock) ದೂಧ್​​​ಸಾಗರದವರೆಗೂ (Dudhsagar) ಪ್ರವೇಶ ನಿಷೇಧಿಸಲಾಗಿದೆ (Ban). ಇಂದು ಗುರುವಾರ ಕೂಡ ಬೆಳಗಾವಿ ಗೋವಾ ಮಾರ್ಗವಾಗಿ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಸ್ಥಳದಲ್ಲೇ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಅಧಿಕಾರಿಗಳು ಠಿಕಾಣಿ ಹೂಡಿಸಿದ್ದಾರೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ (Belagavi rains) ನಿರಂತರ ಭೂಕುಸಿತವಾಗುತ್ತಿದೆ.

 

Published on: Jul 27, 2023 12:50 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More