ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಘಟನೆ ತಡವಾಗಿ ಗೊತ್ತಾಗಿದೆ. ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು. ಪರಮೇಶ್ವರ್ ಹೇಳಿಕೆಯ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಜೂನ್ 2: ಬೆಳಗಾವಿಯಲ್ಲಿ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ ಪರಮೇಶ್ವರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಹಳ ಹಿಂದೆ ನಡೆದಿರುವ ಘಟನೆ ಇದು, ತಡವಾಗಿ ಗೊತ್ತಾಗಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆ ಬಗ್ಗೆ ಅವರು ದೂರು ಕೊಟ್ಟಿರಲಿಲ್ಲ. ಈಗ ದೂರು ಕೊಟ್ಟಿದ್ದಾರೆ, ಐದು ಜನರ ಬಂಧನ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಅವರು ಇನ್ನೂ ಏನೇನಂದರು ಎಂಬುದನ್ನು ತಿಳಿಯಲು ವಿಡಿಯೋ ನೋಡಿ.
Published on: Jun 02, 2025 10:17 AM