ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!

Edited By:

Updated on: Mar 22, 2026 | 11:34 AM

ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಬೆಳಗಾವಿ, ಮಾರ್ಚ್​ 22: ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More