Jagadish Shettar Press Meet Live: ಬೆಳಗಾವಿಯಲ್ಲಿ ಮನೆ ಮಾಡುತ್ತೇನೆ: ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್​

| Updated By: Rakesh Nayak Manchi

Updated on: Mar 28, 2024 | 11:54 AM

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸುದ್ದಿಗೋಷ್ಠಿ ನಡೆಸಿದರು. ಬೆಳಗಾವಿ ನನಗೆ ಹೊಸದು ಅಲ್ಲ, 30 ವರ್ಷಗಳ ಸಂಬಂಧ ಇದೆ. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮ ಭೂಮಿ ಎಂದು ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ, ಮಾ.28: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಅವರು ಸುದ್ದಿಗೋಷ್ಠಿ ನಡೆಸಿದರು. ಬೆಳಗಾವಿ ನನಗೆ ಹೊಸದು ಅಲ್ಲ, 30 ವರ್ಷಗಳ ಸಂಬಂಧ ಇದೆ. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ (Belagavi) ನನ್ನ ಕರ್ಮ ಭೂಮಿ ಎಂದು ಶೆಟ್ಟರ್ ಹೇಳಿದ್ದಾರೆ. ಕೊವಿಡ್, ಪ್ರವಾಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇನೆ. ನಾನು ನಿಗದಿ ಮಾಡಿದ್ದ ಸ್ಥಳದಲ್ಲಿ ಸುವರ್ಣಸೌಧ ನಿರ್ಮಾಣ ಆಯಿತು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ ಎಂದರು.

ಸಣ್ಣ ಪುಟ್ಟ ಸಮಸ್ಯೆಯನ್ನು ಇತ್ಯರ್ಥಕ್ಕೆ ಪ್ರಯತ್ನ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಆರಂಭ ಮಾಡಿದ್ದೇವೆ. ಜಗದೀಶ್ ಶೆಟ್ಟರ್ ಹೊರಗಿನವರು ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮ ಭೂಮಿ ಎಂದರು. ಬೆಳಗಾವಿಯಲ್ಲೇ ನಾನು ಮನೆಯನ್ನು ಮಾಡಿ ವಾಸ ಮಾಡುತ್ತೇನೆ ಎಂದರು.

ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಈಗಾಗಲೇ ಅಭ್ಯರ್ಥಿ ಘೋಷಣೆ ಆಗಿದೆ. ಯಡಿಯೂರಪ್ಪ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ತಪ್ಪು ಗ್ರಹಿಕೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Mar 28, 2024 11:45 AM