6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

Edited By:

Updated on: Apr 11, 2026 | 10:17 AM

ಬೆಳಗಾವಿಯ ಡಿಬಿಯುಡಿಸಿ ಎಇಇ ಅಜಯಸಿಂಗ್ ರಜಪೂತ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 14 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಹಾಗೂ 3.12 ಕೋಟಿ ನಗದು ಡೆಪಾಸಿಟ್ ಜಪ್ತಿ ಮಾಡಲಾಗಿದೆ. ಅಪಾರ ಸಂಪತ್ತು ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಿಂದ ಸಾಬೀತಾಗಿದೆ. ಮನೆಯಲ್ಲಿ ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ನೀಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಅಜಯಸಿಂಗ್ ಅವರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸದ್ಯಕ್ಕೆ ಎಲ್ಲಾ ದಾಖಲೆಗಳು ಮತ್ತು ನಗದನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More