ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಪುಟಾಣಿಗಳ ವೇಷಭೂಷಣ ಕಂಡು ಖುಷ್ ಆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರದಲ್ಲಿ ವಿವಿಧ ವೇಷಭೂಷಣಗಳನ್ನು ತೊಟ್ಟು ಬಂದಿದ್ದ ಪುಟಾಣಿ ಮಕ್ಕಳನ್ನು ಕಂಡು ಇವರು ಫುಲ್ ಖುಷಿಯಾಗಿದ್ದಾರೆ.
ಬೆಳಗಾವಿ, ಸೆಪ್ಟೆಂಬರ್ 16: ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಪೋಷಣ ಅಭಿಯಾಣದ (Poshan Abhiyan) ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗರ್ಭಿಣಿಯರಿಗೆ ಸೀಮಂತ, ಮಕ್ಕಳ ವೇಷ ಭೂಷಣ ಸ್ಪರ್ಧೆ, ಅಕ್ಷರ ಅಭ್ಯಾಸ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಕೂಡಾ ಏರ್ಪಡಿಸಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೇಷಭೂಷಣ ತೊಟ್ಟ ಮಕ್ಕಳನ್ನು ನೋಡಿ ಫುಲ್ ಖುಷ್ ಆಗಿ ಪುಟಾಣಿಗಳನ್ನು ಎತ್ತಿಕೊಂಡು ಪೋಟೋಗೆ ಪೋಸ್ ಕೊಟ್ಟಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
