AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು

ಸಹದೇವ್​ ಮಾನೆ
| Edited By: |

Updated on: Apr 14, 2026 | 10:41 PM

Share

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವು ಕಮ್ಮಾರ ಎಂಬ ಯುವಕ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮನ ಜೀವ ಹೋಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಏಳು ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿರುವುದು ಸಾವಿಗೆ ಕಾರಣ ಎಂದು ಮೃತನ ಸಹೋದರ ರಮೇಶ್ ಲಿಂಗಪುರಿ ದೂರಿದ್ದಾರೆ.

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More