ನಕಲಿ ವೈದ್ಯರ ಹಾವಳಿ: ಬೆಳಗಾವಿಯ ನಾಲ್ಕು ಖಾಸಗಿ ಆಸ್ಪತ್ರೆ ಸೀಜ್
ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ.
ಬೆಳಗಾವಿ, ಮೇ 10: ರಾಜ್ಯದಲ್ಲಿ ಇತ್ತೀಚಿಗೆ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗಿದೆ. ಈ ನಕಲಿ ವೈದ್ಯರು ರೋಗಿಗಳ ಜೀವಕ್ಕೆ ಕುತ್ತಾಗುತ್ತರೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ (Health Department) ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ. ನಕಲಿ ವೈದ್ಯರ ಹಾವಳಿ ಕುರಿತು ದೂರು ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ವಿಶ್ವನಾಥ್ ಭೋವಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದರು. ಯಾದವಾಡದಲ್ಲಿ ತೆರೆಯಲಾಗಿದ್ದ ಅನಧಿಕೃತ ಆಸ್ಪತ್ರೆಗೆ ಬೀಗ ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 10, 2024 03:26 PM
Latest Videos