ನಕಲಿ ವೈದ್ಯರ ಹಾವಳಿ: ಬೆಳಗಾವಿಯ ನಾಲ್ಕು ಖಾಸಗಿ ಆಸ್ಪತ್ರೆ ಸೀಜ್​

Edited By: ವಿವೇಕ ಬಿರಾದಾರ

Updated on: May 10, 2024 | 3:32 PM

ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇಲೆ‌ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್​ ಮಾಡಿದ್ದಾರೆ.

ಬೆಳಗಾವಿ, ಮೇ 10: ರಾಜ್ಯದಲ್ಲಿ ಇತ್ತೀಚಿಗೆ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗಿದೆ. ಈ ನಕಲಿ ವೈದ್ಯರು ರೋಗಿಗಳ ಜೀವಕ್ಕೆ ಕುತ್ತಾಗುತ್ತರೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ (Health Department) ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇಲೆ‌ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್​ ಮಾಡಿದ್ದಾರೆ. ನಕಲಿ ವೈದ್ಯರ ಹಾವಳಿ ಕುರಿತು ದೂರು ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ವಿಶ್ವನಾಥ್ ಭೋವಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದರು. ಯಾದವಾಡದಲ್ಲಿ ತೆರೆಯಲಾಗಿದ್ದ ಅನಧಿಕೃತ ಆಸ್ಪತ್ರೆಗೆ ಬೀಗ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 10, 2024 03:26 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More