ಶಾಲಾ ಆರಂಭದ ಮೊದಲ ದಿನವೇ ಶಾಲೆಗೆ ಬೀಗ ಹಾಕಿದ ಎಸ್​ಡಿಎಂಸಿ ಸದಸ್ಯರು; ಯಾಕೆ ಗೊತ್ತಾ?

Edited By: ಕಿರಣ್ ಹನುಮಂತ್​ ಮಾದಾರ್

Updated on: May 29, 2024 | 2:49 PM

ಬೇಸಿಗೆ ರಜೆ ಮುಗಿಸಿ ನಾಳೆಯಿಂದ ಶಾಲೆ ಆರಂಭ ಆಗುತ್ತಿದೆ. ಈ ಮಧ್ಯೆ ಇಂದು(ಮೇ.29) ಶಾಲಾ ಆರಂಭಕ್ಕೆ ಸ್ವಚ್ಛತೆಗೊಳಿಸಲು ಬಂದ ದಿನವೇ ಎಸ್‌ಡಿಎಂಸಿ(SDMC)ಸದಸ್ಯರು ಸೇರಿಕೊಂಡು ಶಾಲೆಗೆ ಬೀಗ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ತಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕನ್ನು ಬದಲಾವಣೆ ಮಾಡುವಂತೆ ಎಸ್‌ಡಿಎಂಸಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ಬೆಳಗಾವಿ, ಮೇ.29: ಶಾಲಾ ಆರಂಭಕ್ಕೆ ಸ್ವಚ್ಛತೆಗೊಳಿಸಲು ಬಂದ ದಿನವೇ ಎಸ್‌ಡಿಎಂಸಿ(SDMC)ಸದಸ್ಯರು ಸೇರಿಕೊಂಡು ಶಾಲೆಗೆ ಬೀಗ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ತಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕನ್ನು ಬದಲಾವಣೆ ಮಾಡುವಂತೆ ಎಸ್‌ಡಿಎಂಸಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ಹೌದು, ಕಳೆದ ಒಂದು ವರ್ಷದಿಂದ ಮುಖ್ಯ ಶಿಕ್ಷಕ ಮತ್ತು ಎಸ್‌ಡಿಎಂಸಿ ಸದಸ್ಯರ ನಡುವೆ ಜಟಾಪಟಿ ನಡೆಯುತ್ತಿದೆ. ಮುಖ್ಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ ಎಂಬ  ಆರೋಪ ಕೇಳಿಬಂದಿದೆ. ಈ ಕುರಿತು ಡಿಡಿಪಿಐ, ಬಿಇಒಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಇದರಿಂದ ರೊಚ್ಚಿಗೆದ್ದ ಶಾಲಾ ಎಸ್​ಡಿಎಂಸಿ ಸದಸ್ಯರು ಮುಖ್ಯ ಶಿಕ್ಷಕ ಎಂ.ಎಸ್ ಚೌಗಲೆ ಅವರನ್ನು ಬದಲಿಸಿ, ಬೇರೆ ಶಿಕ್ಷಕರನ್ನು ನಿಯೋಜಿಸಲು ಕೋರಿದ್ದಾರೆ. ಆದರೆ, ಮನವಿಗೆ ಸ್ಪಂಧಿಸದ ಅಧಿಕಾರಿಗಳ ವಿರುದ್ಧ ಇದೀಗ ಆಕ್ರೋಶ ವ್ಯಕ್ತಪಡಿಸಿ, ಶಾಲೆಗೆ ಬೀಗ ಹಾಕಿ ಶಾಲೆಯ ಮುಂದೆಯೇ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More