Video: ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ NWKRTC ಬಸ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 18, 2023 | 6:47 PM

ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಬಸ್​ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ನಡೆದಿದೆ. ಬಸ್​ಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಆಗಿಲ್ಲ.

ಬೆಳಗಾವಿ, ನ.18: ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ NWKRTC ಬಸ್(BUS) ಹೊತ್ತಿ ಉರಿದ ಘಟನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.  ಬಸ್​ಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಬಸ್​ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಆಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು  ನಂದಿಸಿದ್ದಾರೆ. ಇನ್ನು ದುರ್ಘಟನೆ ಕುರಿತು ತಿಳಿಯುತ್ತಿದ್ದಂತೆ ಸ್ಥಳಕ್ಕೆ NWKRTC ಅಧಿಕಾರಿಗಳು ದೌಡಾಯಿಸಿದ್ದು, ಬಸ್‌ಗೆ ಹೇಗೆ ಬೆಂಕಿ ತಗುಲಿತು ಎಂಬ ಬಗ್ಗೆ ಪರಿಶೀಲಿಸುತ್ತಿದ್ದಾರೆ. ಈ ಘಟನೆ ಯಮಕನಮರಡಿ ಪೋಲಿಸ್ ಠಾಣೆ‌ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ