ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

Edited By:

Updated on: Feb 04, 2026 | 3:53 PM

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹಣ ನೀಡಲು ನಿರಾಕರಿಸಿದಾಗ ಈ ಘಟನೆ ನಡೆದಿದೆ.

ಬೆಳಗಾವಿ, ಫೆಬ್ರವರಿ 04: ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕಾಗಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್​​​ನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಯುವಕರು ಎರಡು ಸಿಗರೇಟ್ ಮತ್ತು ನೀರಿನ ಬಾಟಲಿಯನ್ನು ತೆಗೆದುಕೊಂಡು ಹಣ ಕೊಡದೇ ಹೋಗುತ್ತಿದ್ದರು. ಈ ವೇಳೆ ಯಲ್ಲಪ್ಪ ನಾಯಕ್ ಪ್ರಶ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us