AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ಪೊಲೀಸರ ದಾಳಿ: ನಿಯಮ ಗಾಳಿಗೆ ತೂರಿರುವುದು ಪತ್ತೆ

ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ಪೊಲೀಸರ ದಾಳಿ: ನಿಯಮ ಗಾಳಿಗೆ ತೂರಿರುವುದು ಪತ್ತೆ

ಸಹದೇವ್​ ಮಾನೆ
| Edited By: |

Updated on: Oct 11, 2026 | 7:23 AM

Share

ಬೆಳಗಾವಿ ಪೊಲೀಸರು ನಗರದ ಪ್ರತಿಷ್ಠಿತ ಕ್ಲಬ್, ಪಬ್, ಹೋಟೆಲ್ ಹಾಗೂ ಧಾಬಾಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗಾವಿ ಕಮಿಷನರ್ ಪ್ರಕಾಶ್ ನೆಕ್ಕಂ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಡೆಗಳಲ್ಲಿ ಈ ದಾಳಿ ನಡೆಸಲಾಗಿದೆ. ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್‌ಗಳು ಸೇರಿದಂತೆ ಹಲವು ಸಂಸ್ಥೆಗಳು ನಿಯಮ ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಬೆಳಗಾವಿ, ಅಕ್ಟೋಬರ್​​ 11: ಪ್ರಭಾವಿ ರಾಜಕಾರಣಿಗಳ ಒಡೆತನದ ಪ್ರತಿಷ್ಠಿತ ಕ್ಲಬ್ ಮತ್ತು ಹೋಟೆಲ್​ಗಳ ಮೇಲೆ ಬೆಳಗಾವಿ ಕಮಿಷನರ್​​ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ ದಾಳಿ ನಡೆದಿದೆ. 40ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದು, ನಿಯಮ ಗಾಳಿಗೆ ತೂರಿ ಕ್ಲಬ್ ನಡೆಸುತ್ತಿರುವುದು ಬೆಳಕಿಗೆ ಬಂದ ಕಾರಣ ಕ್ಲಬ್ ಮತ್ತು ಪಬ್​ಗಳನ್ನ ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ದಾಳಿ ವೇಳೆ ಕೆಲವು ಕಡೆಗಳಲ್ಲಿ ಅಪ್ರಾಪ್ತರು ಕೂಡ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇನ್ನು ದಾಳಿ ವಿಚಾರ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಪ್ರಕಾಶ್ ನಿಕ್ಕಂ ಪ್ರತಿಕ್ರಿಯಿಸಿದ್ದು, ಕ್ಲಬ್, ಹೊಟೆಲ್, ಡಾಬಾಗಳ ಮೇಲೆ ದಾಳಿ ಮಾಡಿದ್ದೇವೆ. ಅಪ್ರಾಪ್ತರು ಬರುವ ಬಗ್ಗೆ ಐಡಿ ಕಾರ್ಡ್ ಪರಿಶೀಲಿಸಿದ್ದೇವೆ. ಕೆಲವು ಕಡೆಗಳಲ್ಲಿ ನಿಯಮಗಳನ್ನ ಮೀರಿದ್ದು ಕಂಡು ಬಂದಿದೆ. ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ರಾತ್ರಿ 11ರ ನಂತರ ಎಲ್ಲವೂ ಬಂದ್ ಮಾಡಲು ಸೂಚನೆ ನೀಡಲಾಗಿದ್ದು, ದಾಂಡಿಯಾ ವೇಳೆ ಹೆಣ್ಣು ಮಕ್ಕಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More