ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್ಗಳ ಮೇಲೆ ಪೊಲೀಸರ ದಾಳಿ: ನಿಯಮ ಗಾಳಿಗೆ ತೂರಿರುವುದು ಪತ್ತೆ
ಬೆಳಗಾವಿ ಪೊಲೀಸರು ನಗರದ ಪ್ರತಿಷ್ಠಿತ ಕ್ಲಬ್, ಪಬ್, ಹೋಟೆಲ್ ಹಾಗೂ ಧಾಬಾಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗಾವಿ ಕಮಿಷನರ್ ಪ್ರಕಾಶ್ ನೆಕ್ಕಂ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಡೆಗಳಲ್ಲಿ ಈ ದಾಳಿ ನಡೆಸಲಾಗಿದೆ. ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್‌ಗಳು ಸೇರಿದಂತೆ ಹಲವು ಸಂಸ್ಥೆಗಳು ನಿಯಮ ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಬೆಳಗಾವಿ, ಅಕ್ಟೋಬರ್ 11: ಪ್ರಭಾವಿ ರಾಜಕಾರಣಿಗಳ ಒಡೆತನದ ಪ್ರತಿಷ್ಠಿತ ಕ್ಲಬ್ ಮತ್ತು ಹೋಟೆಲ್ಗಳ ಮೇಲೆ ಬೆಳಗಾವಿ ಕಮಿಷನರ್ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ ದಾಳಿ ನಡೆದಿದೆ. 40ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದು, ನಿಯಮ ಗಾಳಿಗೆ ತೂರಿ ಕ್ಲಬ್ ನಡೆಸುತ್ತಿರುವುದು ಬೆಳಕಿಗೆ ಬಂದ ಕಾರಣ ಕ್ಲಬ್ ಮತ್ತು ಪಬ್ಗಳನ್ನ ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ದಾಳಿ ವೇಳೆ ಕೆಲವು ಕಡೆಗಳಲ್ಲಿ ಅಪ್ರಾಪ್ತರು ಕೂಡ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇನ್ನು ದಾಳಿ ವಿಚಾರ ಸಂಬಂಧ ಬೆಳಗಾವಿ ಪೊಲೀಸ್ ಕಮಿಷನರ್ ಪ್ರಕಾಶ್ ನಿಕ್ಕಂ ಪ್ರತಿಕ್ರಿಯಿಸಿದ್ದು, ಕ್ಲಬ್, ಹೊಟೆಲ್, ಡಾಬಾಗಳ ಮೇಲೆ ದಾಳಿ ಮಾಡಿದ್ದೇವೆ. ಅಪ್ರಾಪ್ತರು ಬರುವ ಬಗ್ಗೆ ಐಡಿ ಕಾರ್ಡ್ ಪರಿಶೀಲಿಸಿದ್ದೇವೆ. ಕೆಲವು ಕಡೆಗಳಲ್ಲಿ ನಿಯಮಗಳನ್ನ ಮೀರಿದ್ದು ಕಂಡು ಬಂದಿದೆ. ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ರಾತ್ರಿ 11ರ ನಂತರ ಎಲ್ಲವೂ ಬಂದ್ ಮಾಡಲು ಸೂಚನೆ ನೀಡಲಾಗಿದ್ದು, ದಾಂಡಿಯಾ ವೇಳೆ ಹೆಣ್ಣು ಮಕ್ಕಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
