AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್

ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್

ಭಾವನಾ ಹೆಗಡೆ
|

Updated on: May 24, 2026 | 12:40 PM

Share

ಜಿಲ್ಲೆಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣವರ್ ಬಂಧನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಶಿವಾನಂದ ಅವರು ಯಾರಿಗೂ ದ್ರೋಹ ಮಾಡಿಲ್ಲ, ಯಾರ ಜೇಬಿಗೂ ಕತ್ತರಿ ಹಾಕಿಲ್ಲ ಎಂದು ಹಲವು ಹೂಡಿಕೆದಾರರು ಕಣ್ಣೀರು ಹಾಕಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನೀಲಣ್ಣವರ್ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದ್ದು, ನಿವೃತ್ತ ಸೈನಿಕರು ಮತ್ತು ವಯೋವೃದ್ಧ ಮಹಿಳೆಯರು ನೀಲಣ್ಣವರ್‌ರನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದ್ದಾರೆ. ತಾವು ಲಾಭ ಪಡೆದಿರುವುದಾಗಿ ಹೂಡಿಕೆದಾರರು ಹೇಳುತ್ತಿದ್ದು, ಅವರ ಬಂಧನದ ಕುರಿತು ಸಿಐಡಿ ತನಿಖೆ ಮುಂದುವರೆದಿದ್ದರೂ, ಹೂಡಿಕೆದಾರರಿಂದ ವ್ಯಕ್ತವಾಗುತ್ತಿರುವ ಈ ಬಲವಾದ ಬೆಂಬಲ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ. ಸಿಐಡಿ ಅಧಿಕಾರಿಗಳು ಹಣ ವರ್ಗಾವಣೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದು, ಹೆಚ್ಚಿನ ಲಾಭಾಂಶ ಪಡೆದವರಿಂದ ಹಣ ವಸೂಲಿಗೆ ಸಿದ್ಧತೆ ನಡೆಸುತ್ತಿದ್ದಾರೆ.

ಬೆಳಗಾವಿ, ಮೇ 24: ಜಿಲ್ಲೆಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣವರ್ ಬಂಧನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಶಿವಾನಂದ ಅವರು ಯಾರಿಗೂ ದ್ರೋಹ ಮಾಡಿಲ್ಲ, ಯಾರ ಜೇಬಿಗೂ ಕತ್ತರಿ ಹಾಕಿಲ್ಲ ಎಂದು ಹಲವು ಹೂಡಿಕೆದಾರರು ಕಣ್ಣೀರು ಹಾಕಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನೀಲಣ್ಣವರ್ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದ್ದು, ನಿವೃತ್ತ ಸೈನಿಕರು ಮತ್ತು ವಯೋವೃದ್ಧ ಮಹಿಳೆಯರು ನೀಲಣ್ಣವರ್‌ರನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದ್ದಾರೆ. ತಾವು ಲಾಭ ಪಡೆದಿರುವುದಾಗಿ ಹೂಡಿಕೆದಾರರು ಹೇಳುತ್ತಿದ್ದು, ಅವರ ಬಂಧನದ ಕುರಿತು ಸಿಐಡಿ ತನಿಖೆ ಮುಂದುವರೆದಿದ್ದರೂ, ಹೂಡಿಕೆದಾರರಿಂದ ವ್ಯಕ್ತವಾಗುತ್ತಿರುವ ಈ ಬಲವಾದ ಬೆಂಬಲ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ. ಸಿಐಡಿ ಅಧಿಕಾರಿಗಳು ಹಣ ವರ್ಗಾವಣೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದು, ಹೆಚ್ಚಿನ ಲಾಭಾಂಶ ಪಡೆದವರಿಂದ ಹಣ ವಸೂಲಿಗೆ ಸಿದ್ಧತೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More