ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ನೀರು
ಬೆಳಗಾವಿ, ಬೆಂಗಳೂರು, ಹಾಸನ ಸೇರಿದಂತೆ ಕರ್ನಾಟಕದ ಅನೇಕ ಕಡೆಗಳಲ್ಲಿ ಗುರುವಾರ ಮಳೆಯಾಗಿದೆ. ಕೆಲವೆಡೆ ತುಂತುರು ಮಳೆಯಾಗಿದ್ದರೆ, ಇನ್ನು ಕೆಲವೆಡೆ ವರ್ಷಧಾರೆ ಸುರಿದಿದೆ. ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿ, ಭಕ್ತರು ಪರದಾಡುವಂತಹ ಪರಿಸ್ಥಿತಿ ಗುರುವಾರ ನಿರ್ಮಾಣವಾಗಿತ್ತು. ದೇವಸ್ಥಾನಕ್ಕೆ ಪ್ರವಾಹದೋಪಾದಿಯಲ್ಲಿ ನೀರು ಹರಿದು ಬಂದ ವಿಡಿಯೋ ಇಲ್ಲಿದೆ.
ಬೆಳಗಾವಿ, ಏಪ್ರಿಲ್ 4: ಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿ ಭಕ್ತರು ಪರದಾಡುವಂತಾಯಿತು. ಇಂದು (ಶುಕ್ರವಾರ) ಭಕ್ತರು ಎಂದಿನಂತೆ ದೇವಿ ದರ್ಶನ ಪಡೆಯುತ್ತಿದ್ದಾರೆ.