ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ನೀರು

Edited By:

Updated on: Apr 04, 2025 | 10:57 AM

ಬೆಳಗಾವಿ, ಬೆಂಗಳೂರು, ಹಾಸನ ಸೇರಿದಂತೆ ಕರ್ನಾಟಕದ ಅನೇಕ ಕಡೆಗಳಲ್ಲಿ ಗುರುವಾರ ಮಳೆಯಾಗಿದೆ. ಕೆಲವೆಡೆ ತುಂತುರು ಮಳೆಯಾಗಿದ್ದರೆ, ಇನ್ನು ಕೆಲವೆಡೆ ವರ್ಷಧಾರೆ ಸುರಿದಿದೆ. ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿ, ಭಕ್ತರು ಪರದಾಡುವಂತಹ ಪರಿಸ್ಥಿತಿ ಗುರುವಾರ ನಿರ್ಮಾಣವಾಗಿತ್ತು. ದೇವಸ್ಥಾನಕ್ಕೆ ಪ್ರವಾಹದೋಪಾದಿಯಲ್ಲಿ ನೀರು ಹರಿದು ಬಂದ ವಿಡಿಯೋ ಇಲ್ಲಿದೆ.

ಬೆಳಗಾವಿ, ಏಪ್ರಿಲ್ 4: ಬೆಳಗಾವಿ ಜಿಲ್ಲೆಯ ಹಲವೆಡೆ ಗುರುವಾರ ಮಳೆಯಾಗಿದ್ದು, ಸಂಜೆ ಸುರಿದ‌ ಭಾರಿ ಮಳೆಗೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿ ಭಕ್ತರು ಪರದಾಡುವಂತಾಯಿತು. ಇಂದು (ಶುಕ್ರವಾರ) ಭಕ್ತರು ಎಂದಿನಂತೆ ದೇವಿ ದರ್ಶನ ಪಡೆಯುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More