ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?

Updated on: Jan 25, 2026 | 11:02 AM

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎನ್ನಲಾಗಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವಂತೆ ಆದೇಶಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್‌ಗಳ ಹುಡುಕಾಟ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದು, ಈ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರು, ಜನವರಿ 25: ಬೆಳಗಾವಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಅಕ್ಟೋಬರ್ 2022 ರಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ (Belagavi Rs.400 Cr Robbery) ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎನ್ನಲಾಗಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವಂತೆ ಆದೇಶಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್‌ಗಳ ಹುಡುಕಾಟ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದು, ಈ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪರಮೇಶ್ವರ ತಿಳಿಸಿದ್ದಾರೆ.

ಪ್ರಕರಣವು ಇನ್ನೂ ಆರಂಭಿಕ ಹಂತದಲ್ಲಿದೆ. ನಮಗೆ ಸರಿಯಾದ ಮಾಹಿತಿಗಳು ದೊರೆತ ನಂತರ ನಮ್ಮ ರಾಜ್ಯ ಪೊಲೀಸ್ ಇಲಾಖೆಯ ಪಾತ್ರ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಪೊಲೀಸರು ಮುಂದಿನ ತನಿಖೆಗಳಲ್ಲಿ ಕರ್ನಾಟಕದ ಸಹಕಾರ ಅಗತ್ಯವಿದೆ ಎಂಬ ರೀತಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.