AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ

ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ

ಗಣಪತಿ ಶರ್ಮಾ
|

Updated on: Aug 24, 2026 | 8:26 AM

Share

ದೆಹಲಿಯ ಐಟಿಓ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಮತ್ತು ಆಪ್ ಶಾಸಕ ಅನಿಲ್ ಝಾ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಡಿವೈಡರ್​ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡ ಸ್ವಿಫ್ಟ್ ಕಾರು ಇನ್ನೋವಾಗೆ ಡಿಕ್ಕಿ ಹೊಡೆದಿತ್ತು.

ನವದೆಹಲಿ, ಆಗಸ್ಟ್ 24: ದೆಹಲಿಯಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತಕ್ಕೀಡಾಗಿದೆ. ದೆಹಲಿಯ ಐಟಿಓ ಪ್ರದೇಶದ ಪಿಡಬ್ಲ್ಯೂಡಿ ಕಚೇರಿ ಬಳಿ ಭಾನುವಾರ ರಾತ್ರಿ ಸುಮಾರು 9.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೆಹಲಿ ಆಪ್ ಶಾಸಕ ಅನಿಲ್ ಝಾ ಅವರಿಗೂ ಗಾಯಗಳಾಗಿವೆ.

ಸದ್ಯ ಅಭಯ್ ಪಾಟೀಲ್ ಅವರನ್ನು ದೆಹಲಿಯ ಎಲ್.ಎನ್.ಜೆ.ಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವಿವರಗಳ ಪ್ರಕಾರ, ಅಶುತೋಷ್ ಪಾಂಡೆ ಎಂಬುವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು ವಿರುದ್ಧ ದಿಕ್ಕಿನಲ್ಲಿ ಬಂದು, ಡಿವೈಡರ್​ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಶಾಸಕರಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಚಾಲಕ ಅಶುತೋಷ್, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ದೆಹಲಿ ಪೊಲೀಸ್ ಕ್ರೈಮ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us