ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ: ಹುಬ್ಬಳ್ಳಿ ಘಟನೆ ಬೆನ್ನಲ್ಲೇ ಕಠಿಣ ಕ್ರಮ

Edited By:

Updated on: Oct 23, 2026 | 12:16 PM

ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್‌ಪಿ ಕೆ. ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ 19 ವರ್ಷದ ಯುವಕ ಮಾಂಜಾ ದಾರಕ್ಕೆ ಬಲಿಯಾದ ಹಿನ್ನೆಲೆಯಲ್ಲಿ, ಮಾಂಜಾ ದಾರದ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಘೋಷಿಸಿದ್ದಾರೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ಬೆಳಗಾವಿ, ಅಕ್ಟೋಬರ್ 23: ಮಾಂಜಾ ದಾರಕ್ಕೆ ಸಿಲುಕಿ ಗಾಯಗೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದ ಬೆನ್ನಲ್ಲೇ ಬೆಳಗಾವಿಯಲ್ಲೂ ಆಡಳಿತ ಎಚ್ಚೆತ್ತುಕೊಂಡಿದೆ. ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಾಂಜಾ ದಾರ ಬಳಕೆಯಿಂದ ಉಂಟಾಗುತ್ತಿರುವ ಅಪಾಯಗಳ ಕುರಿತು ಎಚ್ಚರಿಕೆ ನೀಡಿದ ಅವರು, ಇತ್ತೀಚೆಗೆ 19 ವರ್ಷದ ಯುವಕನೊಬ್ಬ ಮಾಂಜಾ ದಾರಕ್ಕೆ ಬಲಿಯಾದ ಘಟನೆ ಬೆನ್ನಲ್ಲೇ, ಮಾಂಜಾ ದಾರದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ದಸರಾ ಸಂದರ್ಭದಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯ ಉತ್ತರ ಕರ್ನಾಟಕದಲ್ಲಿ ಹೆಚ್ಚು. ಆದರೆ ಮಾಂಜಾ ದಾರವನ್ನು ಬಳಸುವುದರಿಂದ ಬೈಕ್ ಸವಾರರು, ಸೈಕಲ್ ಸವಾರರು ಸೇರಿದಂತೆ ಪಾದಚಾರಿಗಳ ಕುತ್ತಿಗೆಗೆ ಗಂಭೀರ ಗಾಯಗಳಾಗಿ, ಕೆಲವೊಮ್ಮೆ ಪ್ರಾಣಾಪಾಯವೂ ಸಂಭವಿಸುತ್ತದೆ. ಇಂತಹ ಮಾರಣಾಂತಿಕ ದಾರಗಳ ಮಾರಾಟ ಕಂಡುಬಂದರೆ ವ್ಯಾಪಾರಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು ಮಾಂಜಾ ದಾರವನ್ನು ಖರೀದಿಸಬಾರದು ಮತ್ತು ಬಳಸಬಾರದು ಎಂದು ಅವರು ಸೂಚನೆ ನೀಡಿದ್ದಾರೆ. ಕಾನೂನುಬದ್ಧವಾದ ಸಾಮಾನ್ಯ ದಾರಗಳನ್ನು ಬಳಸಿ ಗಾಳಿಪಟ ಹಾರಿಸುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಿಷೇಧಿತ ಮಾಂಜಾ ದಾರ ಬಳಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More