AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ತಾಯಿ-ಮಗನಿಗೆ ಗಾಯ

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ತಾಯಿ-ಮಗನಿಗೆ ಗಾಯ

ಸಹದೇವ್​ ಮಾನೆ
| Edited By: |

Updated on: Apr 02, 2026 | 9:44 AM

Share

ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಭೀಕರ ಬಿರುಗಾಳಿ ಮಳೆಯಿಂದ ಭಾರೀ ಅನಾಹುತ ಸಂಭವಿಸಿದೆ. ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು, ಮನೆಯಲ್ಲಿದ್ದ ನೀಲವ್ವ (70) ಮತ್ತು ಅವರ ಮಗ ಉಳವಪ್ಪ (37) ತೀವ್ರವಾಗಿ ಗಾಯಗೊಂಡಿದ್ದಾರೆ. ಗ್ರಾಮಸ್ಥರು ತಕ್ಷಣ ರಕ್ಷಣಾ ಕಾರ್ಯದಲ್ಲಿ ತೊಡಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಕಾಲಿಕ ಮಳೆಯಿಂದ ಮನೆಗೆ ಹಾನಿ, ದಿನಬಳಕೆ ವಸ್ತುಗಳು ನಾಶವಾಗಿವೆ.

ಬೆಳಗಾವಿ, ಏ. 2: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭೀಕರ ಬಿರುಗಾಳಿ ಮಳೆಗೆ ಭಾರೀ ಅನಾಹುತ ಸಂಭವಿಸಿದೆ. ಮಳೆಯ ಅಬ್ಬರಕ್ಕೆ ಸಿಲುಕಿ ಮನೆಯೊಂದರ ಮೇಲೆ ತೆಂಗಿನ ಮರ ಮುರಿದು ಬಿದ್ದ ಪರಿಣಾಮ, ಮನೆಯಲ್ಲಿದ್ದ ತಾಯಿ ಮತ್ತು ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಅನಿಗೋಳ ಗ್ರಾಮದ ನಿವಾಸಿ ನೀಲವ್ವ ಯಲ್ಲಯ್ಯನವರ (70) ಮತ್ತು ಅವರ ಮಗ ಉಳವಪ್ಪ (37) ಮನೆಯಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಬುಡಮೇಲಾಗಿ ಮನೆ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ನಾಶವಾಗಿವೆ.ಮರ ಬಿದ್ದ ಸದ್ದನ್ನು ಕೇಳಿದ ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ತಾಯಿ ಮತ್ತು ಮಗನನ್ನು ಸ್ಥಳೀಯರು ಸಾಹಸಪಟ್ಟು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More