ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

Edited By:

Updated on: Apr 11, 2025 | 12:43 PM

ಎಲೆಕೋಸು ಬೆಲೆ ಭಾರೀ ಕುಸಿತದಿಂದಾಗಿ ರೈತರು ತಾವು ಬೆಳೆದ ಬೆಳೆಯನ್ನು ನಾಶಪಡಿಸಿದ್ದಾರೆ. ಬೆಳಗಾವಿಯ ಕಡೋಲಿ ಗ್ರಾಮದಲ್ಲಿ ನಡೆದಿದೆ. ಕೆಜಿಗೆ 70-80 ಪೈಸೆ ಮಾತ್ರ ಬೆಲೆ ಸಿಗುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ನಷ್ಟದಿಂದಾಗಿ ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ್ದಾರೆ.

ಬೆಳಗಾವಿ, ಏಪ್ರಿಲ್ 11: ಎಲೆಕೋಸು (cabbage) ಬೆಲೆ ದಿಢೀರ್ ಕುಸಿತ ಹಿನ್ನೆಲೆ ಕಷ್ಟಪಟ್ಟು ಬೆಳೆದ ಬೆಳೆಯನ್ನು ರೈತರು ನಾಶಪಡಿಸಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೆಜಿಗೆ 70 ರಿಂದ 80 ಪೈಸೆಗೆ ಮಾತ್ರ ಮಾರಾಟವಾಗುತ್ತಿದ್ದು, 10 ಕೆಜಿ ಕ್ಯಾಬೇಜ್​ಗೆ ಕೇವಲ 7 ರೂ ಮಾತ್ರ ಸಿಗುತ್ತಿದೆ. ಹೀಗಾಗಿ ಅನಿವಾರ್ಯವಾಗಿ ಕುರಿಗಳನ್ನ ಬಿಟ್ಟು ರೈತರು ಬೆಳೆ ನಾಶ ಪಡಿಸಿದ್ದಾರೆ. ಮೊನ್ನೆಯಷ್ಟೇ ಡಿಸಿ ಕಚೇರಿ ಎದುರು ಕ್ಯಾಬೇಜ್ ಸುರಿದು ಅನ್ನದಾತರು ಆಕ್ರೋಶ ಹೊರ ಹಾಕಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More