ತೀವ್ರ ಸ್ವರೂಪಗೊಂಡ ಹೋರಾಟ: ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು

Edited By:

Updated on: Oct 30, 2026 | 10:36 PM

ಮುಖ್ಯಾಂಶಗಳು

  • ನಿರಾಣಿ ಶುಗರ್ ಫ್ಯಾಕ್ಟರಿಯಿಂದ ಲಾರಿಯಲ್ಲಿ ಸಕ್ಕರೆ ಸಾಗಾಟ
  • ಖಟಕಭಾವಿ ಕ್ರಾಸ್​ನಲ್ಲಿ ಲಾರಿಗಳನ್ನ ತಡೆ ಹಿಡಿದ ರೈತರು
  • ಸಕ್ಕರೆ ಸಾಗಿಸ್ತಿದ್ದ ಲಾರಿಗಳ ಟೈರ್ ಗಾಳಿ ತೆಗೆದು ಆಕ್ರೋಶ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಭಾವಿ ಕ್ರಾಸ್‌ನಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ರೈತರು ತಡೆದಿದ್ದಾರೆ. MSP ನಿಗದಿಪಡಿಸದೆ ಸಕ್ಕರೆ ಮಾರಾಟ ಮಾಡುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು, ಐದು ಲಾರಿಗಳ ಟೈರ್ ಗಾಳಿ ತೆಗೆದು ಪ್ರತಿಭಟಿಸಿದರು. ಕನಿಷ್ಠ ಬೆಂಬಲ ಬೆಲೆ ಘೋಷಿಸಿದ ನಂತರವೇ ಸಕ್ಕರೆ ಮಾರಾಟ ಮಾಡುವಂತೆ ರೈತರು ತಾಕೀತು ಮಾಡಿದ್ದಾರೆ.

ಬೆಳಗಾವಿ, ಅಕ್ಟೋಬರ್​ 30: ನಿರಾಣಿ ಶುಗರ್ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ 5 ಲಾರಿಗಳನ್ನ ರಸ್ತೆಯಲ್ಲೇ ರೈತರು ತಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಭಾವಿ ಕ್ರಾಸ್​ನಲ್ಲಿ ನಡೆದಿದೆ. ಸಕ್ಕರೆ ಸಾಗಿಸುತ್ತಿದ್ದ ಲಾರಿಗಳ ಟೈರ್ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಿದ್ದು, ಲಾರಿಗಳನ್ನ ವಾಪಸ್ ತೆಗೆದುಕೊಂಡು ಹೋಗುವಂತೆ ತಾಕೀತು ಮಾಡಿದ್ದಾರೆ. ಎಂಎಸ್​​ಪಿ ನಿಗದಿಪಡಿಸಿದ ಬಳಿಕ ಸಕ್ಕರೆ ಮಾರುವಂತೆ ಎಚ್ಚರಿಕೆ ನೀಡಲಾಗಿದೆ. ಇತ್ತೀಚೆಗೆ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ರೈತರು ಮುತ್ತಿಗೆ ಹಾಕಿದ್ದರು. ಆ ಮೂಲಕ ಕಬ್ಬಿನ ಬೆಲೆ ನಿಗದಿಯಾಗುವವರೆಗೆ ಸಕ್ಕರೆ ಮಾರಾಟ ಮಾಡದಂತೆ ಒತ್ತಾಯಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 30, 2026 10:35 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More