ಕಬ್ಬು ಕಾರ್ಖಾನೆ ಮಾಲೀಕರು, ಸರ್ಕಾರದಿಂದ ಫಿಪ್ಟಿ ಫಿಪ್ಟಿ: ಸಭೆಯಲ್ಲಿ ಮಹತ್ವದ ನಿರ್ಧಾರ
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಸಿದ್ದರಾಮಯ್ಯನವರು ತುಮಕೂರು ಕಾರ್ಯಕ್ರಮ ರದ್ದುಪಡಿಸಿ ಕಬ್ಬು ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜೊತೆ ನಿರಂತರವಾಗಿ ಸಭೆ ನಡೆಸಿದ್ದಾರೆ. ಮೂರ್ನಾಲಕು ಸಭೆ ನಡೆಸಿದ ಬಳಿಕ ಸರ್ಕಾರ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಹಾಗಾದ್ರೆ, ಸರ್ಕಾರ ಕೈಗೊಂಡ ತೀರ್ಮಾನವೇನು? ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಡಿಟೇಲ್ಸ್ ಇಲ್ಲಿದೆ.
ಬೆಂಗಳೂರು, (ನವೆಂಬರ್ 07): ಪ್ರತಿ ಕ್ವಿಂಟಲ್ ಕಬ್ಬಿಗೆ 3500 ರೂಪಾಯಿ ನಿಗದಿಪಡಿಸುವಂತೆ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ನವೆಂಬರ್ 07) ನಡೆದ 9ನೇ ದಿನ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದ್ದು, 6 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಸಿದ್ದರಾಮಯ್ಯನವರು ತುಮಕೂರು ಕಾರ್ಯಕ್ರಮ ರದ್ದುಪಡಿಸಿ ಕಬ್ಬು ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜೊತೆ ನಿರಂತರವಾಗಿ ಸಭೆ ನಡೆಸಿದ್ದಾರೆ. ಮೂರ್ನಾಲಕು ಸಭೆ ನಡೆಸಿದ ಬಳಿಕ ಸರ್ಕಾರ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ.
ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ಮೇಲೆ ಸಭೆ ಮಾಡಿದ್ದು, ಸಕ್ಕರೆ ಮಾಲೀಕರಿಂದ 50 ರೂ. ಹಾಗೂ ಸರ್ಕಾರದಿಂದ 50 ರೂ. ನೀಡಲು ನಿರ್ಧರಿಸಲಾಗಿದೆ. ಇದರೊಂದಿಗೆ 3500 ರೂ. ಬೇಡಿಕೆಗೆ 3300 ನೀಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, 3500 ರೂಪಾಯಿಗೆ ಬೇಡಿಕೆ ಇಟ್ಟಿರುವ ರೈತರು 3300 ರೂಪಾಯಿಗೆ ಒಪ್ಪುತ್ತಾರಾ? ಎನ್ನುವುದೇ ಮುಂದಿರುವ ಪ್ರಶ್ನೆ.
Published On - 6:34 pm, Fri, 7 November 25




