ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ಕಬ್ಬು ಬೆಳೆಗಾರರು

Updated on: Nov 06, 2025 | 8:24 PM

ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಿದ್ದು, ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ದೌಡಾಯಿಸಿ ಎರಡು ದಿನ ಸಮಯ ಕೊಡಿ ಎಲ್ಲಾ ಬಗೆಹರಿಸಲಾಗುವುದು ಎಂದು ರೈತರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೂ, ಪಟ್ಟು ಸಡಿಲಿಸದ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಬೆಳಗಾವಿ, (ನವೆಂಬರ್ 06): ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಿದ್ದು, ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ದೌಡಾಯಿಸಿ ಎರಡು ದಿನ ಸಮಯ ಕೊಡಿ ಎಲ್ಲಾ ಬಗೆಹರಿಸಲಾಗುವುದು ಎಂದು ರೈತರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೂ, ಪಟ್ಟು ಸಡಿಲಿಸದ ರೈತರು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕೊನೆಗೆ ಎರಡು ದಿನ ಆಗುವುದಿಲ್ಲ. ನಾಳೆ(ನವೆಂಬರ್ 07) ಸಂಜೆ ವರೆಗೆ ಸಮಯ ಕೊಡುತ್ತೇವೆ. ಅಷ್ಟರೊಳಗೆ ಪ್ರತಿ ಕ್ವಿಂಟಾಲ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಿ ಆದೇಶ ಮಾಡಬೇಕು. ಇಲ್ಲವಾದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕೊನೆಯ ಎಚ್ಚರಿಕೆ ನೀಡಿದರು.