ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ ಕಬ್ಬು ಬೆಳೆಗಾರರು : ಪಟಾಕಿ ಸಿಡಿಸಿ ಸಂಭ್ರಮಿಸಿದ ರೈತರು

Updated on: Nov 07, 2025 | 7:10 PM

ಪ್ರತಿ ಕ್ವಿಂಟಲ್​ ಕಬ್ಬಿಗೆ 3500 ರೂ.ನಿಗದಿಪಡಿಸುವಂತೆ ಒತ್ತಾಯಿಸಿ ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸರ್ಕಾರ ಮಣೆದಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪ್ರತಿ ಟನ್‌ ಕಬ್ಬಿಗೆ 3,300 ರೂ. (Sugarcane Price) ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು.

ಬೆಳಗಾವಿ/ಬೆಂಗಳೂರು, (ನವೆಂಬರ್.7): ಪ್ರತಿ ಕ್ವಿಂಟಲ್​ ಕಬ್ಬಿಗೆ 3500 ರೂ.ನಿಗದಿಪಡಿಸುವಂತೆ ಒತ್ತಾಯಿಸಿ ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ಕಳೆದ 9 ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಸರ್ಕಾರ ಮಣೆದಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪ್ರತಿ ಟನ್‌ ಕಬ್ಬಿಗೆ 3,300 ರೂ. (Sugarcane Price) ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು.

ಶೇ.11.25 ರಿಕವರಿ ಪ್ರಮಾಣದ ಕಬ್ಬಿಗೆ 3250 ರೂ. ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ಸಹ 50 ರೂ. ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೊನೆಗೂ ಸರ್ಕಾರ 3300 ರೂ ನಿಗದಿಪಡಿಸಿದ್ದರಿಂದ ಪ್ರತಿಭಟನಾ ರೈತರಲ್ಲಿ ಸಂಭ್ರಮ ಮನೆ ಮಾಡಿದ್ದು, ಗುರ್ಲಾಪುರ ಕ್ರಾಸ್‌ ಬಳಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಒಟ್ಟಿನಲ್ಲಿ ಕಬ್ಬು ಬೆಳೆಗಾರರ ನಿರಂತರ ಪ್ರತಿಭಟನೆ ಫಲ ಕೊಟ್ಟಿದ್ದು, ಒಂದೊಳ್ಳೆ ಶುಭ ಸುದ್ದಿಯೊಂದಿಗೆ ಧರಣಿಗೆ ಕೊನೆ ಬಿದ್ದಿದೆ.

Published on: Nov 07, 2025 07:09 PM