AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿ ಹೊರವಲಯದಲ್ಲೇ ಹೋರಾಟಗಾರರು ವಶಕ್ಕೆ

ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿ ಹೊರವಲಯದಲ್ಲೇ ಹೋರಾಟಗಾರರು ವಶಕ್ಕೆ

ಸಹದೇವ್​ ಮಾನೆ
| Edited By: |

Updated on:Nov 05, 2026 | 11:52 AM

Share

ಕಬ್ಬು ಬೆಳೆಗಾರರ ಜೈಲ್ ಭರೋ ಚಳವಳಿ ವೇಳೆ ಬೆಳಗಾವಿ ಪೊಲೀಸರು ಪಾದಯಾತ್ರೆ ತಡೆದು ರೈತರನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ಕ್ರಮ ಖಂಡಿಸಿ ರೈತ ಮುಖಂಡ ಚೂನಪ್ಪ ಪೂಜಾರಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ತಳ್ಳಾಟವೂ ನಡೆದಿದೆ.

ಬೆಳಗಾವಿ, ನವೆಂಬರ್​​ 05: ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ ಹಿನ್ನೆಲೆ ಬೆಳಗಾವಿ ಹೊರವಲಯದ ಮುಕ್ತಿ ಮಠದ ಬಳಿ ರೈತರ ಪಾದಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿ ಧರಣಿನಿರತ 200ಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ. ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಚೂನಪ್ಪ ಪೂಜಾರಿ ಕಿಡಿ ಕಾರಿದ್ದು, ರಾಜ್ಯಾದ್ಯಂತ ಬಂದ್​ಗೆ ಕರೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 05, 2026 11:38 AM

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More