ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ

Edited By:

Updated on: Jun 16, 2026 | 5:42 PM

ಸರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಹೌದು....ಸಾವಿರಾರೂ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ಬೆಳಗಾವಿ (Belagavi) ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು (Power Cut) ಕಡಿತಗೊಳಿಸಲಾಗಿದೆ. ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳ ಒಟ್ಟು  58,936 ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ.

ಬೆಳಗಾವಿ, (ಜೂನ್ 16): ಸರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಹೌದು….ಸಾವಿರಾರೂ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ಬೆಳಗಾವಿ (Belagavi) ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು (Power Cut) ಕಡಿತಗೊಳಿಸಲಾಗಿದೆ. ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳ ಒಟ್ಟು  58,936 ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯು ಕರೆಂಟ್ ಕಟ್ ಮಾಡಿದೆ. ಇದರಿಂದಾಗಿ ಕಚೇರಿಯು ಕತ್ತಲಲ್ಲಿ ಮುಳುಗಿದ್ದು, ಸಾರ್ವಜನಿಕರು, ವಿಶೇಷವಾಗಿ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 16, 2026 05:42 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More