ಬೆಳಗಾವಿಯಲ್ಲಿ ಕಾರು-ಸ್ಕೂಟರ್​ ನಡುವೆ ಭೀಕರ ಅಪಘಾತ; ಡಿಕ್ಕಿಯ ರಭಸಕ್ಕೆ ಐವತ್ತು ಮೀಟರ್ ಹಾರಿ ಬಿದ್ದ ಯುವತಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 02, 2024 | 3:09 PM

ಬೆಳಗಾವಿಯ ಮಜಗಾವಿ ಬಳಿ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಡಿಕ್ಕಿಯ(Accident) ರಭಸಕ್ಕೆ ಯುವತಿ ಬರೊಬ್ಬರಿ ಐವತ್ತು ಮೀಟರ್ ಹಾರಿ ಬಿದ್ದಿದ್ದಾರೆ. ಬ್ರಹ್ಮನಗರದ ನಿವಾಸಿ ದಿವ್ಯಾ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದೆ.

ಬೆಳಗಾವಿ, ಜ.02: ಬೆಳಗಾವಿಯ ಮಜಗಾವಿ ಬಳಿ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಡಿಕ್ಕಿಯ(Accident) ರಭಸಕ್ಕೆ ಯುವತಿ ಬರೊಬ್ಬರಿ ಐವತ್ತು ಮೀಟರ್ ಹಾರಿ ಬಿದ್ದಿದ್ದಾರೆ. ಬ್ರಹ್ಮನಗರದ ನಿವಾಸಿ ದಿವ್ಯಾ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೆ ಅಲ್ಲ, ಸ್ಕೂಟಿಗೆ ಗುದ್ದಿದ ಬಳಿಕ ಎದರಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ದಕ್ಷಿಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More