AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ

ಸಹದೇವ್​ ಮಾನೆ
| Edited By: |

Updated on: Jul 06, 2026 | 10:20 AM

Share

ಪಶ್ಚಿಮಘಟ್ಟದಲ್ಲಿ ಭಾರೀ ಮಳೆಯಿಂದ ಬೆಳಗಾವಿ ಜಿಲ್ಲೆಯ ಜಲಪಾತಗಳು ಮರುಜೀವ ಪಡೆದಿವೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಖಾನಾಪುರ ತಾಲೂಕಿನ 9 ಜಲಪಾತಗಳಿಗೆ ಪ್ರವೇಶ ನಿರ್ಬಂಧಿಸಿದೆ. ಅನಾಹುತಗಳನ್ನು ತಡೆಗಟ್ಟುವ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಜುಲೈ 6: ಪಶ್ಚಿಮಘಟ್ಟದ ಭಾಗದಲ್ಲಿ ಮಳೆ ಚುರುಕು ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿದೆ. ಇದರಿಂದ ಜಲಪಾತಗಳು ಮೈದುಂಬಿಕೊಂಡಿದ್ದು ಧುಮ್ಮಿಕ್ಕಿ ಹರಿಯುತ್ತಿವೆ. ಇದನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿದ್ದು, ಅನಾಹುತಗಳನ್ನು ತಡೆಯಲು ಅರಣ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು 9 ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವೇಶ ನಿರ್ಬಂಧ ಹೇರಿದೆ. ಈ ಪ್ರದೇಶಗಳನ್ನು ‘ರಿಸರ್ವ್’ ಎಂದು ಘೋಷಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಹಿಂದೆ ಜಲಪಾತಗಳಲ್ಲಿ ಹುಚ್ಚಾಟ ನಡೆಸಿದ ಕಾರಣದಿಂದ ಜೀವ ಹಾನಿ ಸಂಭವಿಸಿರುವ ಪ್ರಕರಣಗಳು ವರದಿಯಾಗಿದ್ದವು. ಇದೇ ಕಾರಣಕ್ಕೆ, ಯಾವುದೇ ಅಪಾಯ ಸಂಭವಿಸುವುದನ್ನು ತಪ್ಪಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಜಲಪಾತಗಳ ಮಾರ್ಗಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ನಿಷೇಧವನ್ನು ಉಲ್ಲಂಘಿಸಿ ಒಳ ಪ್ರವೇಶಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More