ಬೆಳಗಾವಿ: ತುಂಬಿ ಹರಿಯುತ್ತಿದ್ದ ನದಿಗೆ ಮಗುಚಿ ಬಿದ್ದ ಕಾರ್ಮಿಕರಿದ್ದ ಟ್ರ್ಯಾಕ್ಟರ್

Edited By: ವಿವೇಕ ಬಿರಾದಾರ

Updated on: Jun 09, 2024 | 12:35 PM

ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮೂಡಲಗಿ ತಾಲೂಕಿನ ಅವರಾದಿ ಬಳಿ 14 ಜನ ಕಾರ್ಮಿಕರಿದ್ದ ಟ್ಯಾಕ್ಟರ್​ ಘಟಪ್ರಭಾ ನದಿಗೆ ಮಗುಚಿ ಬಿದ್ದಿದೆ.

ಬೆಳಗಾವಿ, ಜೂನ್​ 09: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ (Ghataprabha River) ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮೂಡಲಗಿ (Mudalagi) ತಾಲೂಕಿನ ಅವರಾದಿ ಗ್ರಾಮದ ಬಳಿ ಕಾರ್ಮಿಕರಿದ್ದ ಟ್ಯಾಕ್ಟರ್​ ಘಟಪ್ರಭಾ ನದಿಗೆ ಮಗುಚಿ ಬಿದ್ದಿದೆ. 13 ಜನ ಕಾರ್ಮಿಕರು ಈಜಿ ದಡ ಸೇರಿದ್ದಾರೆ. ಓರ್ವ ಕಾರ್ಮಿಕ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಕಾರ್ಮಿಕರು ಬಾಗಲಕೋಟೆ (Bagalkote) ಜಿಲ್ಲೆಯ ನಂದಗಾಂವ್ ಗ್ರಾಮದಿಂದ ಮೂಡಲಗಿ ತಾಲೂಕಿನ ಅವರಾದಿ ಗ್ರಾಮಕ್ಕೆ ತೆರಳುತ್ತಿದ್ದರು. ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಕಟ್ಟಲಾಗಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಮೂರು ಅಡಿ ನೀರು ಹರಿಯುತ್ತಿದೆ. ಆದರೂ, ಕೂಡ ಚಾಲಕ ಟ್ರ್ಯಾಕ್ಟರ್​​ ನಿಲ್ಲಿಸದೆ ಬ್ರಿಡ್ಜ್​ ಮೇಲೆ ಹೋಗಿದ್ದಾನೆ. ಅರ್ಧ ದಾರಿಗೆ ಹೋಗುತ್ತಿದ್ದಂತೆ ನೀರಿನ ರಬಸಕ್ಕೆ ಟ್ರ್ಯಾಕ್ಟರ್​​ ನದಿಯಲ್ಲಿ ಮಗುಚಿ ಬಿದ್ದಿದೆ. ಸ್ಥಳಕ್ಕೆ ಕುಲಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟಪ್ರಭಾ ನದಿಯಲ್ಲಿ ನಾಪತ್ತೆಯಾದ ಕಾರ್ಮಿಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More