ದಯಾಮರಣ ಕೊಡಿಸಿ ಎಂದು ಸಚಿವರಿಗೆ ಕೈಮುಗಿದು ವ್ಯಾಪಾರಿಯ ಮನವಿ: ಕಾರಣ ಇಲ್ಲಿದೆ

Edited By:

Updated on: May 22, 2026 | 8:52 AM

ಬೆಳಗಾವಿಯ ಬೀದಿ ವ್ಯಾಪಾರಿಗಳು ಸಚಿವ ಸತೀಶ್ ಜಾರಕಿಹೊಳಿ ಅವರ ಸಭೆಯಲ್ಲಿ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ. ಮೂರು ತಿಂಗಳ ವ್ಯಾಪಾರ ಅನುಮತಿ ಮುಗಿದು ಎಂಟು ತಿಂಗಳು ಕಳೆದರೂ ವಿಸ್ತರಣೆಯಾಗದ ಕಾರಣ ತೀವ್ರ ಒತ್ತಡದಲ್ಲಿದ್ದಾರೆ. ದಯಾಮರಣ ಕೊಡಿಸಿ ಎಂದು ವ್ಯಾಪಾರಿಯೊಬ್ಬರು ಕಣ್ಣೀರು ಹಾಕಿದ್ದು, ಸಂಡೇ ಮಾರ್ಕೆಟ್‌ನಂತಹ ವ್ಯವಸ್ಥಿತ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಬೆಳಗಾವಿ, ಮೇ 22: ನಗರದಲ್ಲಿ ಬೀದಿ ವ್ಯಾಪಾರ ನಡೆಸುವ ವರ್ತಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಸಭೆಯಲ್ಲಿ ತಮ್ಮ ದುಸ್ಥಿತಿಯನ್ನು ಕಣ್ಣೀರು ಹಾಕಿ ನಿವೇದಿಸಿಕೊಂಡಿದ್ದಾರೆ. ಈ ಸಂಬಂಧ ಸಚಿವರಿಗೆ ವ್ಯಾಪಾರಿಯೊಬ್ಬರು ಕೈಮುಗಿದು ದಯಾಮರಣ ಕೊಡಿಸಿ ಎಂದು ಬೇಡಿಕೊಂಡಿರುವ ಪ್ರಸಂಗ ನಡೆದಿದೆ. ಈ ವ್ಯಾಪಾರಿಗಳ ಮೂರು ತಿಂಗಳ ವ್ಯಾಪಾರ ಅನುಮತಿ ಅವಧಿ ಮುಗಿದು ಆರರಿಂದ ಎಂಟು ತಿಂಗಳು ಕಳೆದಿದ್ದು, ಇನ್ನೂ ವಿಸ್ತರಣೆಯಾಗಿಲ್ಲ. ಇದರಿಂದಾಗಿ ಅವರ ಜೀವನ ನಿರ್ವಹಣೆಗೆ ಅಡ್ಡಿಯಾಗಿದ್ದು, ನಿರಂತರ ಒತ್ತಡ ಎದುರಿಸುತ್ತಿದ್ದಾರೆ. ಸಂಡೇ ಮಾರ್ಕೆಟ್‌ನಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಬೇಕೆಂದು ಹಲವರು ಪದೇ ಪದೇ ಮನವಿ ಸಲ್ಲಿಸುತ್ತಿದ್ದಾರೆ. ಕಾನೂನು ಪ್ರಕಾರ ಸಮಸ್ಯೆ ಬಗೆಹರಿಯದಿದ್ದರೆ, ಕ್ರಮ ಕೈಗೊಳ್ಳುವಂತೆ ವ್ಯಾಪಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 22, 2026 08:52 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More