AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸುವರ್ಣ ಸೌಧ ಸುತ್ತ 5,000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ

ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸುವರ್ಣ ಸೌಧ ಸುತ್ತ 5,000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ

ಸಹದೇವ್​ ಮಾನೆ
| Edited By: |

Updated on: Nov 12, 2026 | 10:36 AM

Share

ಡಿಸೆಂಬರ್ 2 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಭದ್ರತಾ ಸಿದ್ಧತೆಗಳು ಬಿರುಸಾಗಿ ನಡೆದಿವೆ. ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ ಸುವರ್ಣ ಸೌಧದಲ್ಲಿ ಭದ್ರತೆ ಪರಿಶೀಲಿಸಲಾಗಿದೆ. 5,000ಕ್ಕೂ ಹೆಚ್ಚು ಪೊಲೀಸರು, ಸಿಸಿಟಿವಿ ಕ್ಯಾಮೆರಾಗಳ ನಿಯೋಜನೆ, ಪ್ರತಿಭಟನಾ ಸ್ಥಳಗಳ ನಿರ್ವಹಣೆ ಮತ್ತು ರಸ್ತೆ ತಡೆ ತಡೆಯಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಬೆಳಗಾವಿ, ನವೆಂಬರ್ 12: ಬೆಳಗಾವಿಯಲ್ಲಿ ಡಿಸೆಂಬರ್ 2 ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ವ್ಯಾಪಕ ಭದ್ರತಾ ಸಿದ್ಧತೆಗಳು ನಡೆಯುತ್ತಿವೆ. ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದ್ದು, ಸುವರ್ಣ ಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 5,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಇದರಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪೊಲೀಸರ ಜೊತೆಗೆ ಕೆಎಸ್‌ಆರ್‌ಪಿ ತುಕುಡಿಗಳು ಸೇರಿವೆ. ಭದ್ರತೆಯ ಭಾಗವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬ್ಯಾರಿಕೇಡಿಂಗ್ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಅಧಿವೇಶನ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿರ್ವಹಿಸಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆಯನ್ನು ತಡೆಯಲು ನವೆಂಬರ್ 20 ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಆಯುಕ್ತ ಪ್ರಕಾಶ್ ನಿಕ್ಕಂ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More