ಬೆಳಗಾವಿಯಲ್ಲಿ ಸಿಎಂ ತಂಗಿರೋ ಸರ್ಕ್ಯೂಟ್ ಹೌಸ್​​ಗೆ ಹೇಗಿದೆ ಗೊತ್ತಾ ಸೆಕ್ಯೂರಿಟಿ?

Updated on: Dec 08, 2025 | 11:18 AM

ಬೆಳಗಾವಿಯಲ್ಲಿ ಇಂದು ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ತಂಗಿರುವ ಸರ್ಕ್ಯೂಟ್ ಹೌಸ್ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿ ಬ್ಲಾಸ್ಟ್ ಪ್ರಕರಣದ ಜೊತೆಗೆ 80ಕ್ಕೂ ಹೆಚ್ಚು ಸಂಘಟನೆಗಳಿಂದ ಪ್ರತಿಭಟನೆ ಎಚ್ಚರಿಕೆ ಹಿನ್ನೆಲೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಸುವರ್ಣಸೌಧದ ಸುತ್ತಮುತ್ತಲೂ ಹೈ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಡಿಸೆಂಬರ್​ 08: 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿಯಲ್ಲಿ ಆರಂಭವಾಗಿದೆ. ದೆಹಲಿ ಬ್ಲ್ಯಾಸ್ಟ್​​ ಬೆನ್ನಲ್ಲೇ ಗುಪ್ತಚರ ಇಲಾಖೆ ನೀಡಿರುವ ಎಚ್ಚರಿಕೆ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಿರುವ ಸರ್ಕ್ಯೂಟ್ ಹೌಸ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಾಮರ್ ವಾಹನ ಮತ್ತು 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 80ಕ್ಕೂ ಹೆಚ್ಚು ಸಂಘಟನೆಗಳು ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆಗೆ ಕರೆ ನೀಡಿರುವುದರಿಂದ, ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 08, 2025 11:16 AM