Winter Session: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಭರ್ಜರಿ ಸಿದ್ಧತೆ; ವಿಡಿಯೋ ನೋಡಿ
ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ. 8 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಕಟ್ಟಡದ ಸ್ವಚ್ಛತೆ ಮತ್ತು ಇತರ ಸಿದ್ಧತೆಗಳು ಭರದಿಂದ ಸಾಗಿವೆ. ಸ್ಪೀಕರ್, ಸಭಾಪತಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಗಳು ನಡೆದಿವೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ, ವಿದ್ಯಾರ್ಥಿಗಳಿಗೆ ವೀಕ್ಷಣೆಗೆ ಅವಕಾಶ ಹಾಗೂ ಸಮರ್ಪಕ ವ್ಯವಸ್ಥೆಗೆ ಸಮಿತಿಗಳನ್ನು ರಚಿಸಲಾಗಿದೆ.
ಬೆಳಗಾವಿ, ನವೆಂಬರ್ 23: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 08ರಿಂದ 19ರ ವರೆಗೆ ಅಂದರೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ನಿಟ್ಟಿನಲ್ಲಿ ಅಧಿವೇಶನಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ಧತೆ ಆರಂಭಿಸಿದೆ. ಸದ್ಯ ಸುವರ್ಣ ಸೌಧ ಕಟ್ಟಡವನ್ನು ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 23, 2025 09:38 PM
