Winter Session: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಭರ್ಜರಿ ಸಿದ್ಧತೆ; ವಿಡಿಯೋ ನೋಡಿ

Edited By:

Updated on: Nov 23, 2025 | 9:39 PM

ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ. 8 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಕಟ್ಟಡದ ಸ್ವಚ್ಛತೆ ಮತ್ತು ಇತರ ಸಿದ್ಧತೆಗಳು ಭರದಿಂದ ಸಾಗಿವೆ. ಸ್ಪೀಕರ್, ಸಭಾಪತಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಗಳು ನಡೆದಿವೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ, ವಿದ್ಯಾರ್ಥಿಗಳಿಗೆ ವೀಕ್ಷಣೆಗೆ ಅವಕಾಶ ಹಾಗೂ ಸಮರ್ಪಕ ವ್ಯವಸ್ಥೆಗೆ ಸಮಿತಿಗಳನ್ನು ರಚಿಸಲಾಗಿದೆ.

ಬೆಳಗಾವಿ, ನವೆಂಬರ್​ 23: ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 08ರಿಂದ 19ರ ವರೆಗೆ ಅಂದರೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ನಿಟ್ಟಿನಲ್ಲಿ ಅಧಿವೇಶನಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ಧತೆ ಆರಂಭಿಸಿದೆ. ಸದ್ಯ ಸುವರ್ಣ ಸೌಧ ಕಟ್ಟಡವನ್ನು ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 23, 2025 09:38 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More