AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಹೇಳಿದ್ದಿಷ್ಟು

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಹೇಳಿದ್ದಿಷ್ಟು

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 25, 2025 | 2:48 PM

Share

ಡಿ. 8ಕ್ಕೆ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಶಾಸಕರು ಮಾತನಾಡುತ್ತಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ವಿಶೇಷ ದಿನಗಳನ್ನು ನಿಗದಿಪಡಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಶಾಸಕರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧಾರವಾಡ, ಅಕ್ಟೋಬರ್​ 25: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ವಾರ ಬೆಳಗಾವಿ ಡಿಸಿಯೊಂದಿಗೆ ಸಭೆ ಮಾಡುತ್ತೇನೆ. ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಲ್ಲ. ಇರೋವರೆಗೂ ಪ್ರಜಾಪ್ರಭುತ್ವದಲ್ಲಿ ಕೇಳೋದು ತಪ್ಪು ಅನಿಸುತ್ತೆ. ಕಾಲ ಸುಧಾರಣೆ ಮಾಡಬೇಕಿದೆ, ನಮ್ಮಿಂದ ಸುಧಾರಣೆ ಆಗಲ್ಲ. ಪ್ರಶ್ನೆ ಕೇಳಿದ ಶಾಸಕರೇ ಒಂದು ನಿಮಿಷದಲ್ಲಿ ಓಡಿ ಹೋಗುತ್ತಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More