ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಹೇಳಿದ್ದಿಷ್ಟು
ಡಿ. 8ಕ್ಕೆ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಶಾಸಕರು ಮಾತನಾಡುತ್ತಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ವಿಶೇಷ ದಿನಗಳನ್ನು ನಿಗದಿಪಡಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಶಾಸಕರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧಾರವಾಡ, ಅಕ್ಟೋಬರ್ 25: ಡಿಸೆಂಬರ್ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ವಾರ ಬೆಳಗಾವಿ ಡಿಸಿಯೊಂದಿಗೆ ಸಭೆ ಮಾಡುತ್ತೇನೆ. ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಲ್ಲ. ಇರೋವರೆಗೂ ಪ್ರಜಾಪ್ರಭುತ್ವದಲ್ಲಿ ಕೇಳೋದು ತಪ್ಪು ಅನಿಸುತ್ತೆ. ಕಾಲ ಸುಧಾರಣೆ ಮಾಡಬೇಕಿದೆ, ನಮ್ಮಿಂದ ಸುಧಾರಣೆ ಆಗಲ್ಲ. ಪ್ರಶ್ನೆ ಕೇಳಿದ ಶಾಸಕರೇ ಒಂದು ನಿಮಿಷದಲ್ಲಿ ಓಡಿ ಹೋಗುತ್ತಾರೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.