ಬೆಳಗಾವಿ: ಗೃಹ ಲಕ್ಷ್ಮಿ ಹಣದಿಂದ ಖಾರ ಪುಡಿ ತಯಾರಿಸುವ ಯಂತ್ರ ಖರೀದಿಸಿದ ಮಹಿಳೆ

| Updated By: Ganapathi Sharma

Updated on: Nov 04, 2024 | 9:16 AM

ಗೃಹ ಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಫ್ರಿಜ್, ದ್ವಿಚಕ್ರ ವಾಹನ ಖರೀದಿಸಿದ ಬಗ್ಗೆ ಈ ಹಿಂದೆ ವರದಿಯಾಗಿತ್ತು. ಇದೀಗ ಬೆಳಗಾವಿಯ ಮಹಿಳೆಯೊಬ್ಬರು ಖಾರ ಪುಡಿ ತಯಾರಿಸುವ ಯಂತ್ರ ಖರೀದಿಸಿದ್ದು, ಖುದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಖಾರ ಪುಡಿ ತಯಾರಿಸುವ ಕಿರು ಉದ್ದಿಮೆಗೆ ಚಾಲನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ.

ಬೆಳಗಾವಿ, ನವೆಂಬರ್ 4: ಗೃಹ ಲಕ್ಷ್ಮಿ ಯೋಜನೆಯಡಿ ಬದ ಹಣದಲ್ಲಿ ಮಹಿಳೆಯೊಬ್ಬರು ಖಾರ ಪುಡಿ ಮಾಡುವ ಯಂತ್ರ ಖರಿದೀಸಿದ್ದಾರೆ. ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮದ ತಾಯವ್ವ ಲಕಮೋಜಿ ಖದೀಸಿದ ಯಂತ್ರವನ್ನು, ಆಕೆಯ ಕಿರು ಉದ್ದಿಮೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ಮಾಡಿದ್ದಾರೆ. ಗೃಹ ಲಕ್ಷ್ಮಿ ಹಣದಲ್ಲಿ ಅನೇಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಗೃಹ ಲಕ್ಷ್ಮಿ ಹಣದಲ್ಲಿ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ್ದು ಸುದ್ದಿಯಾಗಿತ್ತು. ಯೋಜನೆಯಡಿ ಬಂದ ಹಣದ ಸಹಾಯದಿಂದ ಮಹಿಳೆಯೊಬ್ಬರು ಮಗನಿಗೆ ದ್ವಿಚಕ್ರ ವಾಹನ ಖರೀದಿಸಿ ಕೊಟ್ಟಿದ್ದೂ ಸುದ್ದಿಯಾಗಿತ್ತು. ಇದೀಗ ಅದಕ್ಕೆ ಹೊಸದೊಂದು ಸೇರ್ಪಡೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ