Loading video

ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ

| Updated By: ವಿವೇಕ ಬಿರಾದಾರ

Updated on: Mar 14, 2025 | 11:40 AM

ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 2024 ಡಿಸೆಂಬರ್ 14 ರಿಂದ 2025 ಮಾರ್ಚ್ 12 ರವರೆಗೆ 3.68 ಕೋಟಿ ರೂಪಾಯಿಗಳ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ 3.40 ಕೋಟಿ ನಗದು, 20.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 6.39 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ ಸೇರಿವೆ. ಗುರುವಾರ ನಡೆದ ಹುಂಡಿ ಎಣಿಕೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಪೊಲೀಸರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 3 ತಿಂಗಳ ಅವಧಿಯಲ್ಲಿ 3.40 ಕೋಟಿ ನಗದು, 20.82 ಲಕ್ಷ ಮೌಲ್ಯದ ಚಿನ್ನಾಭರಣ, 6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಯಲ್ಲಮ್ಮ ದೇವಸ್ಥಾನದಲ್ಲಿ ಗುರುವಾರ ಇಡೀ ದಿನ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಪೊಲೀಸರು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪ್ರತಿಬಾರಿ ಎಣಿಕೆ ನಡೆದಾಗ 1 ಕೋಟಿಯಿಂದ 1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. 2024 ಡಿಸೆಂಬರ್ 14ರಿಂದ 2025 ಮಾರ್ಚ್ 12ರವರೆಗೆ ಮೂರು ತಿಂಗಳ ಅವಧಿಯಲ್ಲಿ ಒಟ್ಟು 3.68 ಕೋಟಿ ರೂ. ಸಂಗ್ರಹವಾಗಿದೆ.