ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರ ಪ್ರತಿಭಟನೆ ವೇಳೆ ಯುವಕನೋರ್ವ ರೈತರಿಗೆ ಕನ್ಯಾ ಕೊಡತ್ತಿಲ್ಲ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್ ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟಿಸಿದ್ದಾರೆ.
ಬೆಳಗಾವಿ, ಡಿಸೆಂಬರ್ 12: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೆಳಗಾವಿಯ ಓಲ್ಡ್ ಪಿಬಿ ರಸ್ತೆ ಬಳಿ ರೈತರು ಪ್ರತಿಭಟನೆ ಮಾಡಿದರು. ಹೋರಾಟದ ಸ್ಥಳಕ್ಕೆ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಭೇಟಿ ನೀಡಿ ರೈತರ ಮನವಿ ಆಲಿಸಿದರು. ಈ ವೇಳೆ ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಯುವಕನೋರ್ವ ಹೇಳಿದ್ದು, ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ನಗುತ್ತಲೇ ಉತ್ತರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
