AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

ಬೆಳಗಾವಿ ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ

Sahadev Mane
| Edited By: |

Updated on: Jun 09, 2026 | 12:36 PM

Share

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಪಿಎಂಸಿ ರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಮಳೆಯಾಗಿ ಒಂದು ದಿನ ಕಳೆದರೂ ನೀರು ಇಳಿಮುಖವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಚರಂಡಿ ವ್ಯವಸ್ಥೆಗೆ ಆಗ್ರಹಿಸಿದ್ದಾರೆ.

ಬೆಳಗಾವಿ, ಜೂನ್​ 09: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆ ಸುರಿದ ಮಳೆಯ ಪರಿಣಾಮವಾಗಿ ಪಟ್ಟಣದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲೂ ಮುಖ್ಯವಾಗಿ ಎಪಿಎಂಸಿ ರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಮಳೆ ನಿಂತು ಒಂದು ದಿನ ಕಳೆದರೂ ನೀರಿನ ಮಟ್ಟ ಕಡಿಮೆಯಾಗದ ಕಾರಣ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಅಥವಾ ನೀರು ಹೊರಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Sahadev Mane
Sahadev Mane