ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

Edited By:

Updated on: Jun 23, 2026 | 2:24 PM

Belagavi News: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರಾಕಸಕೊಪ್ಪ ಡ್ಯಾಂ ಸಂಪೂರ್ಣ ಬರಿದಾಗಿದೆ. ಕುಡಿಯುವ ನೀರಿಗಾಗಿ ಡೆಡ್ ಸ್ಟೋರೇಜ್ ನೀರನ್ನೇ ಬಳಸಲಾಗುತ್ತಿದೆ. ಬೆಳಗಾವಿ ನಗರಕ್ಕೆ 12 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದ್ದು, ಕೇವಲ 15 ದಿನಗಳ ನೀರು ಸಂಗ್ರಹ ಮಾತ್ರ ಉಳಿದಿದೆ. ಮಳೆ ಬಾರದಿದ್ದರೆ ತೀವ್ರ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ.

ಬೆಳಗಾವಿ, ಜೂನ್ 23: ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ತೀವ್ರ ನೀರಿನ ಬಿಕ್ಕಟ್ಟು ಎದುರಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ರಾಕಸಕೊಪ್ಪ ಡ್ಯಾಂ ಸಂಪೂರ್ಣವಾಗಿ ಬರಿದಾಗಿದ್ದು, ಡೆಡ್ ಸ್ಟೋರೇಜ್ ನೀರನ್ನೇ ಬಳಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಪರಿಸ್ಥಿತಿಯಿಂದಾಗಿ ಬೆಳಗಾವಿ ನಗರದಲ್ಲಿ ಪ್ರತಿ 12 ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಸಾಮಾನ್ಯವಾಗಿ ಮೂರರಿಂದ ಐದು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ನೀರಿನ ಅಭಾವದಿಂದ ಈ ಅವಧಿ ಹೆಚ್ಚಾಗಿದೆ. ಡ್ಯಾಂನಲ್ಲಿ ಇನ್ನು ಕೇವಲ ಎರಡು ವಾರಗಳಷ್ಟು ನೀರು ಮಾತ್ರ ಲಭ್ಯವಿದ್ದು, ಮಳೆ ಬರದಿದ್ದರೆ ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.

ರೈತಾಪಿ ವರ್ಗ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದು, ನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಹಿಡಕಲ್ ಜಲಾಶಯದಲ್ಲೂ ಕೇವಲ 5 ಟಿಎಂಸಿ ನೀರು ಉಳಿದಿದ್ದು, ಒಟ್ಟಾರೆ ಪರಿಸ್ಥಿತಿ ಗಂಭೀರವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ನಿರ್ವಹಣೆ ಸವಾಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 23, 2026 11:14 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More