Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ

Edited By:

Updated on: Apr 27, 2024 | 9:08 PM

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬೆಳಗಾವಿಗೆ ನಾಲ್ಕು ಜನ ಸ್ವಾಗತಕಾರರು ಆಗಮಿಸಿದ್ದಾರೆ. ಮೋದಿ ಸ್ವಾಗತಕ್ಕೆ ಬಹಳ ಕಾತುರತೆಯಿಂದ ಕಾಯ್ತಿದ್ದೇವೆ ಎಂದು ಹೇಳಿದ್ದಾರೆ.

ಬೆಳಗಾವಿ, ಏಪ್ರಿಲ್​ 27: ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ (Belgaum Lok Sabha constituency) ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬೆಳಗಾವಿಗೆ ನಾಲ್ಕು ಜನ ಸ್ವಾಗತಕಾರರು ಆಗಮಿಸಿದ್ದಾರೆ. ಮೋದಿ ಸ್ವಾಗತಕ್ಕೆ ಬಹಳ ಕಾತುರತೆಯಿಂದ ಕಾಯ್ತಿದ್ದೇವೆ ಎಂದು ಹೇಳಿದ್ದಾರೆ. ಕನಸಲ್ಲೂ ಅಂದುಕೊಂಡಿರಲಿಲ್ಲ ಇಂದು ಅವರನ್ನ ಸ್ವಾಗತ ಮಾಡುತ್ತಿರುವು ಖುಷಿ ಇದೆ ಎಂದು ಟಿವಿ9 ಮುಂದೆ ನಯನಾ ಭಸ್ಮೆ, ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್ ಮತ್ತು ಸುಭಾಷ್ ಸಣ್ಣವೀರಪ್ಪನವರ್​ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಮಾತುಕತೆ ಇಲ್ಲಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 27, 2024 09:06 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More