ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್

Edited By:

Updated on: Jun 15, 2025 | 1:37 PM

ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್​​ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ.

ಬೆಳಗಾವಿ, (ಜೂನ್ 15): ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್​​ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ. ಇನ್ನು ಈ ಸೇತುವೆ ಕೊಚ್ಚಿಕೊಂಡು ಹೋಗಿದ್ದರಿಂದ ಜಾಂಬೋಟಿ, ಕಣಕುಂಬಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದ ಅಕ್ಕಪಕ್ಕದ ಗ್ರಾಮಸ್ಥರು, ಸವಾರರು ಪರದಾಡುತ್ತಿದ್ದಾರೆ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More